ನಾಳೆಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಸಮಯ? ರಿಸಲ್ಟ್ ನೋಡುವುದೇಗೆ?

45
firstsuddi

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬಿಡುಗಡೆಯಾಗಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karesults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಲ್ಲೇಶ್ವರಂ ನಲ್ಲಿರುವ ಪರೀಕ್ಷಾ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು. ರಾಜ್ಯದಾದ್ಯಂತ ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.