ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್‌ಕುಮಾರ್.

103
firstsuddi

ಬೆಂಗಳೂರು: ಗೀತಾ ಶಿವರಾಜ್‌ಕುಮಾರ್ ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಗೀತಾ ಅವರು ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಭಾರಿ ಮತಗಳ ಅಂತರದಿಂದ ಸೋತಿದ್ದರು.

2021ರಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಪಕ್ಷದಿಂದ ಹೊರಬಂದು ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ಆಗಲೇ ಗೀತಾ ಶಿವರಾಜ್‌‌ಕುಮಾರ್ ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹಬ್ಬಿದ್ದವು.

ಪ್ರಸ್ತುತ 2023ರ ವಿಧಾನಸಭಾ ಚುನಾವಣೆಯಲ್ಲಿ ಸೊರಬ ವಿಧಾನಸಭೆಯಿಂದ ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಇವರ ಇನ್ನೊಬ್ಬ ಸಹೋದರ ಸಿನಿಮಾ ನಟ ಕುಮಾರ್ ಬಂಗಾರಪ್ಪ ಅವರು ಬಿಜೆಪಿಯಿಂದ ಸೊರಬ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. 

ಮಧು ಬಂಗಾರಪ್ಪಗೆ ಸಹೋದರಿ ಗೀತಾ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದು, ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.