ಚಿಕ್ಕಮಗಳೂರು : ನಾಳೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಖಾಕಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಎಸ್ಪಿ, ಎಎಸ್ಪಿ, ಮೂವರು ಡಿವೈಎಸ್ಪಿ ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಪೊಲೀಸರು ಹಾಗೂ 4 ಕೆ.ಎಸ್.ಆರ್.ಪಿ ತುಕಡಿಗಳು ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಜಿಲ್ಲಾದ್ಯಂತ ಇಡೀ ರಾತ್ರಿ ಪೊಲೀಸರು ಗಸ್ತು ತಿರುಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.










