ನಾಳೆ ಒಡಿಶಾ,ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ…

66
firstsuddi

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತದ ಭೀತಿ ಆವರಿಸಿದೆ.

ನಾಳೆ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜವಾದ್ ಚಂಡಮಾರುತದಿಂದಾಗಿ, ಪಶ್ಚಿಮ ಬಂಗಾಳದ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಡಿಸೆಂಬರ್ 4ರಂದು ಭಾರೀ ಮಳೆಯಾಗಬಹುದು. ಹಾಗೇ, ಇಂದು ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜವಾದ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿರುವ ಕೆಲವು ಪ್ರದೇಶಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ ನಿನ್ನೆ ಸಂಜೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ (8) 32 ತಂಡಗಳನ್ನು ನಿಯೋಜಿಸಿದೆ.

ಭಾರತದಲ್ಲಿ ನಾಳೆಯಿಂದ ಜವಾದ್ ಚಂಡಮಾರುತ ಅಪ್ಪಳಿಸುವುದರಿಂದ ಇಂದು ಉನ್ನತ ಅಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.

ಜವಾದ್ ಚಂಡಮಾರುತ ಹಿನ್ನಲೆ ಈಗಾಗಲೇ ಒಡಿಶಾ ರಾಜ್ಯಕ್ಕೆ ರೆಡ್ ಅಲರ್ಡ್ ಘೋಷಿಸಲಾಗಿದ್ದು, ಆಂಧ್ರಪ್ರದೇಶಕ್ಕೂ ಕೂಡ ಎಚ್ಚರಿಕೆ ನೀಡಲಾಗಿದೆ.