ನಾಳೆ ತಜ್ಞರ ಜೊತೆ ಸಿಎಂ ಸಭೆ – ನೈಟ್ ಕರ್ಫ್ಯೂ, ಓಮಿಕ್ರಾನ್ ತಡೆಯುವ ಬಗ್ಗೆ ಚರ್ಚೆ…

102
firstsuddi

ವಿಜಯಪುರ : ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಜ್ಞರು ಹಾಗೂ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.

ಈ ಸಂಬಂಧ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಅಕ್ಕ-ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ತಮಿಳುನಾಡು, ಕೇರಳದಲ್ಲಿ ಓಮಿಕ್ರಾನ್ ಹೆಚ್ಚಾಗುತ್ತಿದ್ದು, ಆ ರಾಜ್ಯಗಳಿಂದ ಬರುವ ಜನರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ನಾಳೆ ತಜ್ಞರು ಹಾಗೂ ಹಿರಿಯ ಸಚಿವರ ಜತೆ ಸಭೆ ನಡೆಸಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಗುವುದು ಎಂದರು.

ರಾಜ್ಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯಕ್ಕೆ ಬರುವ ಎಲ್ಲರೂ ಕಡ್ಡಾಯವಾಗಿ ನೆಗೆಟಿವ್ ವರದಿ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ. ನಾಳೆ ನಡೆಯುವ ಸಭೆಯಲ್ಲಿ ಹೊಸ ವರ್ಷದ ಆಚರಣೆ ಸೇರಿದಂತೆ ರೋಗ ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ನಾಳೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.