ನಾಳೆ ದೆಹಲಿಗೆ ಸಿಎಂ ಪ್ರಯಾಣ ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ…

62
firstsuddi

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರುಗಳನ್ನು ಸಿಎಂ ಭೇಟಿಯಾಗಲಿದ್ದಾರೆ. ಬಳಿಕ ಸಂಜೆ ಬಂಡವಾಳ ಹೂಡಿಕೆದಾರರ ಸಮ್ಮೇಳನದ ಪೂರ್ವಭಾವಿಯಾಗಿ ವಿದೇಶಿ ಗಣ್ಯರನ್ನು ಭೇಟಿ ಮಾಡಲಿದ್ದಾರೆ.

ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ, ವರಿಷ್ಠರ ಭೇಟಿಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಬುಧವಾರ ಮಧ್ಯಾಹ್ನ ಅಥವಾ ಸಂಜೆ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ.