ನಾಳೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ…

220
firstsuddi

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದೇಶಿಸಿರುವ ಲಾಕ್‍ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ನಾಳೆ ಬೆಳಿಗ್ಗೆ ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ. ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಅವರು ಆದೇಶಿಸಿರುವ ಲಾಕ್‍ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ಹೀಗಿದ್ದರೂ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಲಾಕ್‍ಡೌನ್ ಮುಂದುವರೆಸಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದ್ದು, ಈ ಕುರಿತು ಪ್ರಧಾನಿ ಮೋದಿ ಅವರು ನಾಳೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.