ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ…

51
firstsuddi

ಬೆಂಗಳೂರು : ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವ ಕಾರಣ ಮಾ.26ರಂದು(ನಾಳೆ) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ನಾಳೆ ರಾತ್ರಿ 9.30ರಿಂದ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ, ಕಡೆಗೆ ಕೊನೆಯ ರೈಲು ರಾತ್ರಿ 9 ಗಂಟೆಗೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕಂಗೇರಿ ಕಡೆಗೆ ರಾತ್ರಿ 9:30 ಗಂಟೆಗೆ ಹೊರಡಲಿದೆ. ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ನಾಳೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.