ಬೆಂಗಳೂರು : ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿ ಇರಬಾರದು. ಯಾವ ಪಕ್ಷದವರನ್ನು ಇಂಥವರು ನೆಮ್ಮದಿಯಾಗಿ ಇರಲು ಬಿಡಲ್ಲ. ನಾನು ಮುಖ್ಯಮಂತ್ರಿ ಆದಾಗಲೂ ನೆಮ್ಮದಿಯಾಗಿ ಇರಲು ಬಿಡಲಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ ಅಂತಾ ಪತ್ರ ಬರೆದಿದ್ದರು. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಬಡವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ರಾಜಕಾರಣ ಜನಸೇವೆಗೆ ಇರುವ ಸಾಧನ ಅಂತ ನಂಬಿದವರು ನಾವು. ಹಣ-ಅಧಿಕಾರದ ಸ್ವಾರ್ಥ ಸಾಧನೆಗಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವವರಿಗೆ ಜನ ಮತ ನೀಡಬಾರದು ಎಂದು ಟ್ವೀಟ್ ಮಾಡಿದ್ದಾರೆ.












