ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸಾವು…

58
firstsuddi

ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.