ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ – ಏಳು ಮಂದಿ ದುರ್ಮರಣ…

58
firstsuddi

ರಾಯ್ಪುರ : ನಿಂತಿದ್ದ ಟ್ರಕ್ ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಕೊರ್ಬಾ ಪೊಲೀಸರು ತಿಳಿಸಿದ್ದಾರೆ.

ಕೊರ್ಬಾದ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮದಾಯಿ ಘಾಟ್ ಬಳಿ ಮುಂಜಾನೆ 4:00 ಗಂಟೆ ವೇಳೆಗೆ ಘಟನೆ ನಡೆದಿದೆ. ಖಾಸಗಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ ಛತ್ತೀಸ್ ಗಢ ರಾಜಧಾನಿ ರಾಯ್ಪುರದಿಂದ ಸರ್ ಗುಜ್ ಗೆ ತೆರಳುತ್ತಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕೊರ್ಬಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ.