ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ – ನಾಲ್ವರ ದಾರುಣ ಸಾವು…

80
firstsuddi

ಚಿತ್ರದುರ್ಗ : ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಪಂಚರ್ ಆಗಿ ನಿಂತಿದ್ದ ಈರುಳ್ಳಿ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗದಗ ಜಿಲ್ಲೆಯ ರೋಣದಿಂದ ಬೆಂಗಳೂರಿಗೆ ತೆರಳುತ್ತಿದ್ದ ಈರುಳ್ಳಿ ಲಾರಿಯಲ್ಲಿದ್ದ ರಾಯಚೂರು ಜಿಲ್ಲೆಯ ಹುಲುಗಪ್ಪ, ರೋಣದ ಚಾಲಕ ಶರಣಪ್ಪ, ವಿಜಯಪುರ ಜಿಲ್ಲೆಯ ಕ್ಲೀನರ್ ಸಂಜಯ್, ಕುಷ್ಟಗಿಯ ಮಂಜುನಾಥ್ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ಕೈಗೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.