ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ- ಸ್ಥಳದಲ್ಲೇ 6 ಮಂದಿ ಸಾವು…

45
firstsuddi

ಚಂಡೀಗಢ: ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ರೇವಾರಿಯ ಖಾರ್ಖರಾ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಖಾರ್ಖರಾ ಗ್ರಾಮದ ಬಳಿ ಕಾರಿನಲ್ಲಿದ್ದವರು ತಮ್ಮ ವಾಹನದ ಟೈರ್‌ಗಳನ್ನು ಬದಲಾಯಿಸುತ್ತಿದ್ದಾಗ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರು ಅವರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರು ಖಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.