ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಕೈಗೆ ಶಾಹಿ ಹಾಕಿದ್ದ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ…

189
firstsuddi

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಕ್ಕೆ ಅಭಿಮಾನಿಯೊಬ್ಬರು ತಮ್ಮ ತೋರು ಬೆರಳನ್ನು ಕತ್ತರಿಸಿಕೊಂಡಿರುವ ಘಟನೆ ಮದ್ದೂರು ತಾಲ್ಲೂಕಿನ ಅಬಲವಾಡಿ ಗ್ರಾಮದಲ್ಲಿ ನಡೆದಿದೆ. ಸುನಿಲ್ ಎಂಬುವವರು ಜೆಡಿಎಸ್ ಕಾರ್ಯಕರ್ತರಾಗಿದ್ದು, ತನ್ನ ಮತ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲಿಲ್ಲ ಎಂದು ಕೈಗೆ ಶಾಹಿ ಹಾಕಿದ್ದ ಬೆರಳನ್ನೇ ಕತ್ತರಿಸಿಕೊಂಡಿರುವ ಪೋಟೋ ಈಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.