ನಿಖಿಲ್ ನ್ನು ಚುನಾವಣೆಗೆ ನಿಲ್ಲಿಸುವ ಅನಿವಾರ್ಯತೆಯನ್ನು ಕಾಂಗ್ರೆಸ್ ನಾಯಕರೇ ಸೃಷ್ಟಿಸಿದರು: ಹೆಚ್.ಡಿ.ಕುಮಾರಸ್ವಾಮಿ.

29

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸ್ಪರ್ಧೆ ವಿಚಾರದಲ್ಲಿ ಕೊನೆಯ ಹಂತದವರೆಗೂ ಹಲವು ಬೆಳವಣಿಗೆಗಳು ನಡೆದು ಕೊನೆಗೆ ಅನಿವಾರ್ಯವಾಗಿ ನಿಖಿಲ್ ನ್ನು ಚುನಾವಣೆಗೆ ನಿಲ್ಲಿಸುವ ಪರಿಸ್ಥಿತಿಗೆ ಕಾಂಗ್ರೆಸ್ ನಾಯಕರೇ ತಂದೊಡ್ಡಿದರು ಎಂದು ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ
ಇಂದು ಬೆಂಗಳೂರಿನ ಮಾಧ್ಯಮ-ಮಿತ್ರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮೊನ್ನೆ ರಾತ್ರಿಯೇ ನಿರ್ಧಾರವಾಗಿದ್ದು, ಒಂದು ರಾತ್ರಿಯಲ್ಲಿ ಕಾರ್ಯಕರ್ತರು ಹಳ್ಳಿಹಳ್ಳಿಗೆ ಭೇಟಿ ನೀಡಿದ್ದರು. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ನಮ್ಮ ಪಕ್ಷ ಮತ್ತು ಬಿಜೆಪಿಯ ಎಲ್ಲಾ ಹಿರಿಯ ಮುಖಂಡರು ಹಳ್ಳಿ ಮತ್ತು ನಗರ ಪ್ರದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು, ಕಾರ್ಯಕರ್ತರು ಸೇರಿರುವುದನ್ನು ನೋಡಿದರೆ ನಿಖಿಲ್ ಗೆ ಇರುವ ಜನಬೆಂಬಲ ನೋಡಬಹುದು ಎಂದರು.
ಕಾಂಗ್ರೆಸ್ ಪಕ್ಷದವರು ಹಣಬಲ ಮತ್ತು ಅಧಿಕಾರದಿಂದ ಈಗಲೇ ತಾವು ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಬೀಗುತ್ತಿದ್ದಾರೆ. ಆ ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲದೆ ಸಿ ಪಿ ಯೋಗೇಶ್ವರ್ ಅವರನ್ನು ಮನವೊಲಿಸಿ ಅವರ ಪಕ್ಷಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದನ್ನೆಲ್ಲ ಕ್ಷೇತ್ರದ ಜನತೆ ನೋಡಿದ್ದಾರೆ. ಈಗ ಮತ್ತೆ ಕುತಂತ್ರ ಮಾಡುತ್ತಿದ್ದಾರೆ. ನಾನು ಯಾರ ಬಗ್ಗೆ ಟೀಕೆ ಮಾಡುವುದಿಲ್ಲ. ನಾನು ಚನ್ನಪಟ್ಟಣದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದರು.