ಬೆಳಗಾವಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ನಾಗ್ಪುರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 21 ರಂದು ನಾಗ್ಪುರದಲ್ಲಿರುವ ಸಚಿವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಖೈದಿ ಫೋನ್ ಕರೆಗಳನ್ನು ಮಾಡಿದ್ದಾನೆ. ಅಂದು ಮೂರು ಬಾರಿ ಕರೆ ಮಾಡಿ 10 ಕೋಟಿ ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ್ದನು. ಈ ಸಂಬಂಧ ನಾಗ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿದ್ದರು.










