ನಿಮ್ಮ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ-ಈಶಾನ್ಯ ಭಾರತೀಯರಿಗೆ ಪ್ರಧಾನಿ ಮೋದಿ ಭರವಸೆ…

197
firstsuddi

ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಪ್ರತಿಭಟನಾಕಾರರಿಗೆ ಪ್ರಧಾನಿ ನರೇಂದ್ರ ಮೋದಿಯವರು ನಿಮ್ಮ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ ಅಸ್ಸಾಮ್‍ನ ನನ್ನ ಸಹೋದರ ಸಹೋದರಿಯರಿಗೆ ನಾನು ಒಂದು ಭರವಸೆ ನೀಡಲು ಬಯಸುತ್ತೇನೆ. ನಿಮ್ಮ ಹಕ್ಕು, ಅನನ್ಯ ಗುರುತು, ಮತ್ತು ಸುಂದರ ಸಂಸ್ಕೃತಿಯನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ. ಪೌರತ್ವ ಮಸೂದೆ ಬಗ್ಗೆ ಅನಗತ್ಯ ಭಯಪಡುವ ಅವಶ್ಯಕತೆಯಿಲ್ಲ. ಅದು ಪ್ರವರ್ಧಮಾನಕ್ಕೆ ಬಂದು ಬೆಳೆಯುತ್ತದೆ. 6ನೇ ಷರತ್ತಿನನ್ವಯ ಅಸ್ಸಾಮಿನ ಜನರ ರಾಜಕೀಯ, ಭಾಷಾ, ಸಾಂಸ್ಕೃತಿಕ ಮತ್ತು ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲು ಕೇಂದ್ರ ಸರ್ಕಾರ ಮತ್ತು ನಾನು ಸಂಪೂರ್ಣ ಬದ್ಧರಾಗಿರುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.