ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ…

57
firstsuddi

ಬೆಂಗಳೂರು : ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಶುರುವಾಗಿದೆ.

ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ಅವರಿಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.