ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಫಿಕ್ಸ್-ಸುಪ್ರೀಂ ತೀರ್ಪು…

697
firstsuddi

ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ನಿರ್ಭಯಾ ತೀರ್ಪು ಪ್ರಶ್ನಿಸಿ ಆರೋಪಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ಭಯಾ ಪ್ರಕರಣದಲ್ಲಿ ಸಿಜೆಐ ಎಸ್.ಎ.ಬೋಬ್ಡೆ ಅವರ ಸಹೋದರನ ಪುತ್ರ ಅರ್ಜುನ್ ಬೋಬ್ಡೆ ಸಂತ್ರಸ್ತೆಯ ತಾಯಿ ಪರವಾಗಿ ವಾದ ಮಂಡಿಸಿದ್ದರು. ಹೀಗಾಗಿ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಈ ಪ್ರಕರಣದಿಂದ ಹಿಂದೆ ಸರಿದು ಈ ವಿಚಾರಣೆಗೆ ಹೊಸ ಪೀಠ ರಚಿಸುವಂತೆ ಹೇಳಿ ವಿಚಾರಣೆಯನ್ನು ಕೈಬಿಟ್ಟಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ನೇತೃತ್ವದ ತ್ರಿಸದಸ್ಯ ಪೀಠ ಅಕ್ಷಯ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.