ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹ : ಬಿ.ಎಸ್ ಯಡಿಯೂರಪ್ಪ.

194
firstsuddi

ಧಾರವಾಡ : ನಿರ್ಭಯ ಪ್ರಕರಣದ ಅತ್ಯಾಚಾರಿಗಳಿಗೆ ಸರ್ವೋಚ್ಚ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದ್ದಾರೆ. ತ್ವರಿತವಾಗಿ ಘಟನೆಯ ಬಗ್ಗೆ ನ್ಯಾಯಾಲಯ ತೀರ್ಪು ನೀಡಿರುವುದು. ಈ ತರಹದ ಕೃತ್ಯಗಳಲ್ಲಿ ಪಾಲ್ಗೊಳ್ಳುವರಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದರು. ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಗೌರವ ರಕ್ಷೆ ನೀಡಲಾಯಿತು. ಉಪ ಮುಖ್ಯ ಮಂತ್ರಿಗಳು , ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಗಣಿ ಮತ್ತು ವಿಜ್ಞಾನ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಸಿ.ಸಿ.ಪಾಟೀಲ್ ಸೇರಿದಂತೆ ಮತ್ತಿತ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.