ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಂಡಿದ್ದು, ಈ ಮೂಲಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಅಂತಿಮವಾಗಿದೆ. ಜ.7 ರಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆರೋಪಿಗಳಿಗೆ ಜ.22ರಂದು ಬೆಳಿಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಆರೋಪಿಗಳಾದ ಮುಖೇಶ್ ಹಾಗೂ ವಿನಯ್ ಕುಮಾರ್ ಸುಪ್ರೀಂ ಕೋರ್ಟ್‍ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ಈಗಾಗಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ.










