ನಿರ್ಭಯಾ ಪ್ರಕರಣ-ಆರೋಪಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ರಾಷ್ಟ್ರಪತಿ…

193
firstsuddi

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದು, ಈ ಮೂಲಕ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಖಾಯಂ ಆಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವಾಲಯ ಆರೋಪಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ರವಾನೆ ಮಾಡಿತ್ತು. ಈ ಅರ್ಜಿಯನ್ನು ಪರಿಶೀಲನೆ ನಡೆಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.