ನಿರ್ಮಾಣ ಹಂತದ ಲಿಫ್ಟ್ ಕುಸಿದು 4 ಮಂದಿ ಸಾವು…

70
firstsuddi

ನೋಯ್ಡಾ: ನಿರ್ಮಾಣ ಹಂತದಲ್ಲಿರುವ ಹೌಸಿಂಗ್ ಸೊಸೈಟಿ ಗುಂಪಿನ ಸರ್ವಿಸ್ ಲಿಫ್ಟ್ ಕುಸಿದು ಬಿದ್ದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿರುವ ಅಮ್ರಪಾಲಿ ಡ್ರೀಮ್ ವ್ಯಾಲಿ ಸೊಸೈಟಿಯಲ್ಲಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನೂ ಘಟನೆಯಲ್ಲಿ ಕೆಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಅಪಘಾತಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.