ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್…

73
firstsuddi

ಶಿವಮೊಗ್ಗ: ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಡಬಲ್ ಮರ್ಡರ್ ಆಗಿರುವ ಭೀಕರ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ಎಂಬಲ್ಲಿ ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಮಂಜಪ್ಪ(45) ಹಾಗೂ ಬೀರಪ್ಪ(46) ಎಂದು ಗುರುತಿಸಲಾಗಿದೆ. ಹಣದ ವ್ಯವಹಾರಕ್ಕೆ ಸಂಬಂಧಪಟ್ಟಂತೆ ರಾಜಪ್ಪ ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಇಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೊತೆಗೆ ಬೆರಳಚ್ಚು ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.

ಈ ಹಿನ್ನಲೆ ಆರೋಪಿ ರಾಜಪ್ಪನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.