ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು…

83
firstsuddi

ಬೆಂಗಳೂರು : ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮಹಾಲಕ್ಷ್ಮೀ ಲೇಓಟ್ ನಲ್ಲಿರುವ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ನಿನ್ನೆ ನಸುಕಿನ ಜಾವ 2:56 ರ ವೇಳೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮದ್ಯದ ಬಾಟಲನ್ನು ಮನೆಗೆ ಎಸೆದು ಪರಾರಿಯಾಗಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ರಾಕ್ ಲೈನ್ ವೆಂಕಟೇಶ್ ಅವರು ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಮದ್ಯದ ಬಾಟಲಿ ಎಸೆದಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕುಟುಂಬದವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಕ್ ಲೈನ್ ಮನೆ ಬಳಿ ಇಬ್ಬರು ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿದೆ.