ತುಮಕೂರು : ನಿಷೇಧಾಜ್ಞೆ ಉಲ್ಲಂಘಿಸಿದ 15 ಮಂದಿ ವಿದ್ಯಾರ್ಥಿನಿಯರ ವಿರುದ್ಧ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನಲೆ ಈಗಾಗಲೇ ಶಾಲಾ-ಕಾಲೇಜುಗಳ ಬಳಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಡುವೆ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ವಿರುದ್ಧ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲರ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ವಿದ್ಯಾರ್ಥಿನಿಯರ ಹೆಸರು ಉಲ್ಲೇಖಿಸಿಲ್ಲ ಎಂದು ತಿಳಿದುಬಂದಿದೆ.










