ನಿಷೇಧಾಜ್ಞೆ ಜಾರಿಯಿದ್ದರೂ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು…

226
firstsuddi

ಬೆಂಗಳೂರು : ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಿದ್ದರೂ ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಟೌನ್ ಹಾಲ್ ಬಳಿ ಪ್ರತಿಭಟನಾನಿರತರು ಮಸೂದೆಯನ್ನು ವಿರೋಧಿಸಿ ಘೋಷಣೆ ಕೂಗಿ ಧರಣಿಗೆ ಮುಂದಾಗಿದ್ದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಾಹನ, ಬಿಎಂಟಿಸಿ ಬಸ್ ಸಾಕಾಗದೆ ವಿವಿಧ ಖಾಸಗಿ ವಾಹನವನ್ನು ಬಳಸಿ ಪ್ರತಿಭಟನಾಕಾರರನ್ನು ಸಾಗಿಸುತ್ತಿದ್ದಾರೆ. ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗುತ್ತಾ ಬಸ್‍ಗಳಿಗೆ ಅಡ್ಡಲಾಗಿ ಮಲಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.