ನೀರಿನಾಳದೊಳಗೆ ತ್ರಿವರ್ಣ ಧ್ವಜವನ್ನು ಹಾರಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ…

64
firstsuddi

ಚೆನ್ನೈ: ದೇಶವು ಇಂದು 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಎಲ್ಲಿ ನೋಡಿದರೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ನೀರಿನಾಳದೊಳಗೆ ತ್ರಿವರ್ಣ ಧ್ವಜವನ್ನು ಹಾರಿಸಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿಶೇಷ ಗೌರವ ಸಲ್ಲಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್, ನೀರಿನ ಒಳಗೆ ರಾಷ್ಟ್ರಧ್ವಜವನ್ನು ಹಾರಿಸುವ ದೃಶ್ಯದ ವೀಡಿಯೋವನ್ನು ಹಂಚಿಕೊಂಡಿದೆ. ಈ ವೀಡಿಯೋ ಇದೀಗ ವೈರಲ್ ಆಗಿದ್ದು ಹಲವರು ಅಚ್ಚರಿ ವ್ಯಕ್ತಪಡಿಸಿದ್ದರೆ, ಮತ್ತೊಂದಷ್ಟು ಮಂದಿ ಪ್ರತಿಯಾಗಿ ಶುಭಾಶಯ ತಿಳಿಸಿದ್ದಾರೆ.

ಈ ವೀಡಿಯೋ ಪೋಸ್ಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ ಸುಮಾರು 37,000 ಜನ ವೀಕ್ಷಿಸಿದ್ದಾರೆ. 2,700ಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ. ಅನೇಕರು ವೀಡಿಯೋಗೆ ಬಗೆಬಗೆಯ ಕಾಮೆಂಟ್ ಕೂಡ ಮಾಡಿದ್ದಾರೆ.