ತುಮಕೂರು : ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದ್ದು, ಕವನ(7), ಯೋಕ್ಷಿತಾ(3) ಮೃತ ದುರ್ದೈವಿಗಳು. ನಿನ್ನೆ ಸಂಜೆ ಈ ದುರ್ಘಟನೆ ನಡೆದಿದೆ.
ತಾಯಿ ಮಂಜುಳಾ ಕಟ್ಟೆಯಲ್ಲಿ ಬಟ್ಟೆ ತೊಳೆಯುತ್ತಿದ್ದರು. ಈ ವೇಳೆ ತಾಯಿ ಬಳಿ ತೆರಳಿದ ಕವನ, ಯೋಕ್ಷಿತಾ ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಟ್ಟೆಯೊಳಗೆ ಬಿದ್ದಿದ್ದಾರೆ. ಕೂಡಲೇ ಮಕ್ಕಳನ್ನ ಕಾಪಾಡಲು ಮಂಜುಳಾ ಕಟ್ಟೆಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು, ತಾಯಿಯನ್ನು ರಕ್ಷಣೆ ಮಾಡಿದ್ದಾರೆ.
ಗುಬ್ಬಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.










