ನೀರು ಕುಡಿಯಲು ಹೋಗಿ ನೀರು ಪಾಲಾದ ಮೂವರು ಸಹೋದರಿಯರು.

50
firstsuddi

ಗದಗ : ನೀರು ಕುಡಿಯಲು ಹೋಗಿದ್ದ ಮೂವರು ಸಹೋದರಿಯರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಿನ್ನೆ ನಡೆದಿದೆ.

ಅತ್ತಿಕಟ್ಟಿ ತಾಂಡಾದ ಸುನೀತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ (13) ಹಾಗೂ ಡೋಣಿ ತಾಂಡಾದ ಸುನೀತಾ ಲೋಕೇಶ್ ಲಮಾಣಿ(10) ಮೃತರು. ಬಾಲಕಿಯರು ಕುರಿ ಮರಿ ಮೇಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ನೀರು ಕುಡಿಯಲೆಂದು ಹೊಂಡದ ಬಳಿ ತೆರಳಿದ್ದಾರೆ. ಓರ್ವ ಬಾಲಕಿ ನೀರು ಕುಡಿಯುವ ವೇಳೆ ಕಾಲು ಜಾರಿ ಬಿದ್ದಾಗ ಮತ್ತಿಬ್ಬರು ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ತಂದೆ, ತಾಯಿ ಜೊತೆ ಗೋವಾದಲ್ಲಿ ವಾಸವಿರುವ ಅತ್ತಿಕಟ್ಟಿ ತಾಂಡಾದ ಸುನೀತಾ ಹಾಗೂ ಅಂಕಿತಾ ಚಿಕ್ಕಪ್ಪನ ಮದುವೆಗೆ ಬಂದಿದ್ದರಂತೆ.
ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.