ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಭೋಧಿಸಿದರು. ಬಸವರಾಜ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 11 ಗಂಟೆಗೆ ಆರಂಭವಾದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಕೇವಲ ಮೂರು ನಿಮಿಷದಲ್ಲಿ ಮುಕ್ತಾಯಗೊಂಡಿತು.










