ನೂತನ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಬೇಡಿ, ಅರುಣ್ ಜೇಟ್ಲಿ ಮನವಿ…

188
firstsuddi

ನವದೆಹಲಿ : ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಅವರು ನೂತನ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರದಲ್ಲಿ ಪ್ರತಿ ಬಾರಿ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ನಾನು ಸಚಿವನಾಗಿದ್ದೆ. ನನಗೆ ಈ ಅವಕಾಶವನ್ನು ಮಾಡಿಕೊಟ್ಟಿದ್ದಕ್ಕೆ ಬಿಜೆಪಿ ನಾಯಕರಿಗೆ ಧನ್ಯವಾದಗಳು. ಆದರೆ ನಾನು ಕಳೆದ 9 ತಿಂಗಳಿನಿಂದ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಸಂಪುಟ ಸೇರಲು ಅಸಾಹಯಕನಾಗಿದ್ದೇನೆ. ನಿಮ್ಮ ಸರ್ಕಾರದ ಅವಧಿಯಲ್ಲಿ 5 ವರ್ಷ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಅನಾರೋಗ್ಯದ ಕಾರಣದಿಂದ ಸರ್ಕಾರದಲ್ಲಿ ಕಾರ್ಯನಿರ್ವಹಿಸಲು ಆಗುವುದಿಲ್ಲ. ಹೀಗಾಗಿ ನಾನು ಈ ಬಾರಿಯ ಸಂಪುಟದಲ್ಲಿ ಸೇರದಿರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.