ನೂತನ ಸಿಎಂ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಮೋದಿ.

94
firstsuddi

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿ ಅವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತಂದಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ. ಅವರ ಅಧಿಕಾರಾವಧಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.