ರಾಂಚಿ : ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ಧ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿನ್ನೆ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ನೂಪುರ್ ಹೇಳಿಕೆಗೆ ಜಾರ್ಖಂಡ್ ನ ರಾಂಚಿಯಲ್ಲೂ ಆಕ್ರೋಶ ವ್ಯಕ್ತಪಡಿಸಿ, ಮುಸ್ಲಿಂ ಸಂಘಟನೆ ಪ್ರತಿಭಟನೆ ನಡೆಸಿದವು. ಈ ವೇಳೆ, ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅನೇಕರು ಗಾಯಗೊಂಡಿದ್ದಾರೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.










