ನೆರೆ ಹಾನಿ ಪರಿಹಾರಕ್ಕೆ 500 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ.

54
firstsuddi

ಉಡುಪಿ : ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಪರಿಹಾರಕ್ಕೆ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.

ಉಡುಪಿಯಲ್ಲಿಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ಬಹಳಷ್ಟು ರಸ್ತೆಗಳು ಹದಗೆಟ್ಟಿವೆ, ಮೂಲಸೌಕರ್ಯಗಳು ಹಾಳಾಗಿವೆ. ಹೀಗಾಗಿ ತಕ್ಷಣ ಮೂಲಸೌಕರ್ಯಗಳನ್ನು ಮರು ಸ್ಥಾಪನೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿಗೆ ಈ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.