ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!

130
Firstsuddi

ಧಾರವಾಡ : ನವ ವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.

ರಂಜಿತಾ ಹಂಚಿನಮನಿ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಮಂಜುನಾಥ ಹಂಚಿನಮನಿ ಎಂಬಾತನೊಂದಿಗೆ ವಿವಾಹವಾಗಿದ್ದರು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮನೆಯವರು ರಂಜಿತಾಳಿಗೆ ಕಿರುಕುಳ ನೀಡುತ್ತಿದ್ದರು ಎಂದು ರಂಜಿತಾ ತವರು ಮನೆಯವರು ಆರೋಪಿಸಿದ್ದು, ಈ ಬಗ್ಗೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.