ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗ್ರಾಮಲೆಕ್ಕಿಗ…

95
firstsuddi

ಹಾಸನ(ಬೇಲೂರು) : ಗ್ರಾಮಲೆಕ್ಕಿಗನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ನಡೆದಿದೆ.

ಅರಕಲಗೂಡು ತಾಲ್ಲೂಕಿನ ಬೈರಾಪುರದ ಬಸವರಾಜು (46)ನೇಣಿಗೆ ಶರಣಾದ ವ್ಯಕ್ತಿ. ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.