ಕಾರವಾರ : ಪೊಲೀಸ್ ಕಾನ್‍ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಹೊನ್ನಾವರದ ಹಳದೀಪುರದ ನಿವಾಸಿ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೇದೆ. ಇಂದು ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಮಹಿಳಾ ಕ್ಲರ್ಕ್ ಕೆಲಸಕ್ಕೆ ಆಗಮಿಸಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










