ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್‌ಟೇಬಲ್ ಆತ್ಮಹತ್ಯೆ…

74
firstsuddi

ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಕಾನ್ಸ್‌ಟೇಬಲ್. 2020-21ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.