ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…

104
firstsuddi

ಮಂಗಳೂರು : ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಂಗಳೂರು ನಗರದ ಕುಮಾರಸ್ವಾಮಿ ಬಡಾವಣೆ ನಿವಾಸಿ ಭರತ್(20) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಈತ ತಾನು ವಾಸವಿದ್ದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾನೆ. ಆದರೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ. ಆದ್ದರಿಂದ ಅವರ ವಾಟ್ಸ್ ಆಪ್ ನಂಬರ್ ಗೆ ‘ಕಾಲೇಜಿನ ಪ್ರಾಧ್ಯಾಪಕರೊಬ್ಬರು ತಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡದೆ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡರು. ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದ್ದರಿಂದ ಈ ಲೋಕವನ್ನು ತ್ಯಜಿಸುತ್ತಿದ್ದೇನೆ’ ಎಂದು ಭರತ್ ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.