ಶಿವಮೊಗ್ಗ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಮತ್ತು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕೆಂಬ ಕೂಗು ಸಹ ಬಲವಾಗಿ ಕೇಳಿ ಬರುತ್ತಿದೆ. ಇದರ ಮಧ್ಯೆ ನೇಹಾ ಕೊಲೆ ಪ್ರಕರಣ ಕುರಿತು ನಗರದಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣವನ್ನು ಸಿಒಡಿಗೆ ವಹಿಸಲಾಗುತ್ತಿದೆ. ಇತರೆ ಕಾರಣದಿಂದ ನಾನು ನೇಹಾ ಮನೆಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಆದ್ರೆ ಅವರ ಮನೆಗೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹೋಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗೆ ತ್ವರಿತವಾಗಿ ಶಿಕ್ಷೆ ಆಗಬೇಕೆಂದು ವಿಶೇಷ ಕೋರ್ಟ್ ಗೆ ವಹಿಸಿದ್ದೇವೆ. ಆದಷ್ಟು ಬೇಗ ಪ್ರಕರಣವನ್ನು ಇತ್ಯರ್ಥ ಪಡಿಸುತ್ತೇವೆ. ನಮ್ಮ ಕಾಲದಲ್ಲಿ ಕ್ರೈಮ್ ಕಡಿಮೆ ಆಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಅವಧಿಯಲ್ಲಿ 1390 ಪ್ರಕರಣಗಳು ನಡೆದಿವೆ. ನಾವು ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.










