ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ; ನಳೀನ್ ಕುಮಾರ್ ಕಟೀಲ್

47
firstsuddi

ಮಂಗಳೂರು: ಮೂಡಾ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ ವಾಲ್ಮೀಕಿ ನಿಗಮದಲ್ಲು 187 ಕೋಟಿ ಹಗರಣ ಆಗಿದೆ ಆದರೂ ಮುಖ್ಯಮಂತ್ರಿ ಅಧಿಕಾರದ ಆಸೆಗೆ ಅಂಟಿಕೊಳ್ಳುತ್ತಿದ್ದಾರೆ ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೆಕೆಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯದ್ಯಕ್ಷ ನಳಿನ್ ಕುಮಾರ್ ನಳೀನ್ ಕುಮಾರ್ ಕಟೀಲ್ ಒತ್ತಾಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದ ಇವರು ಕಾಂಗ್ರೆಸ್ ನಾಯಕರು ಹಾತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗಿಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಹಗರಣದಲ್ಲಿ ಸಾವಿರರು ಕೋಟಿ ಲೂಟಿ ಆಗಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಅಂಟಿ ಕುಳಿತುಕೊಂಡಿದ್ದಾರೆ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು ಹಾಗೂ ರಾಜ್ಯಪಾಲರನ್ನು ನಿಂದಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು