ಬೆಂಗಳೂರು : ಮಕ್ಕಳಿಗೆ ಶಿಕ್ಷಣಕ್ಕಿಂತ ಯಾವುದೂ ಮುಖ್ಯ ಇಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಈ ಆದೇಶದ ಅನುಷ್ಠಾನದ ಸಂದರ್ಭದಲ್ಲಿ ಎಲ್ಲ ಮಕ್ಕಳು, ಪಾಲಕರು, ಶಿಕ್ಷಕರು ಸಹಕಾರ ನೀಡಬೇಕು. ಶಿಕ್ಷಣವನ್ನು ಮಕ್ಕಳಿಗೆ ಕೊಡಲು ನೆರವು ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ತರಗತಿಯನ್ನು ಬಹಿಷ್ಕರಿಸುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪಾಲಿಸಿ. ಎಲ್ಲ ವಿದ್ಯಾರ್ಥಿಗಳು ತರಗತಿ ಮತ್ತು ಪರೀಕ್ಷೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.










