ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ…

46
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪತ್ರಿಕೆಗೆ ಸೇರಿದ ಸುಮಾರು 12 ಸ್ಥಳಗಳ ಮೇಲೆ ಇಂದು ದಾಳಿ ನಡೆಸಿದೆ.

ಕಳೆದ ತಿಂಗಳು ಇಡಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಹೆರಾಲ್ಡ್ ಹೌಸ್ ನ ನ್ಯಾಷನಲ್ ಹೆರಾಲ್ಡ್ ನ ಪ್ರಕಾಶನ ಕಚೇರಿ ಇರುವ ನಾಲ್ಕನೇ ಮಹಡಿಯಲ್ಲಿ ಇಡಿ ತಪಾಸಣೆ ನಡೆಸಿದೆ. ಬೆಳಿಗ್ಗೆ 10 ಗಂಟೆಗೆ ಇಡಿ ಅಧಿಕಾರಿಗಳು ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿರುವ ಪತ್ರಿಕೆ ಕಚೇರಿಗಳು ಮತ್ತು ಪತ್ರಿಕೆಯನ್ನು ನಡೆಸುತ್ತಿರುವ ಕಂಪೆನಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಗೆ (ಎಜೆಎಲ್) ಸೇರಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಪತ್ತೆ ಕಾರ್ಯಾಚರಣೆ ಮುಗಿದ ಬಳಿಕ, ಕೆಲವು ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.