ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣ ವಿಚಾರವಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯ(ಇಡಿ) ಬಳಿ ಮನವಿ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಲು ಇಡಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ.










