ನ್ಯಾಷನಲ್ ಹೆರಾಲ್ಡ್ ಪ್ರಕರಣ ; ನಾಲ್ಕನೇ ದಿನವೂ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ.

68
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ದಿನವೂ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದಾರೆ. 

ದೇಶಾದ್ಯಂತ ಕಾಂಗ್ರೆಸ್ ನಾಯಕರ ತೀವ್ರ ಪ್ರತಿಭಟನೆ ನಡುವೆ, ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಜೂನ್ 13 ರಿಂದ 15 ರವರೆಗೆ ವಿಚಾರಣೆ ನಡೆಸಿತ್ತು. ಸುಮಾರು 30 ಗಂಟೆಗಳಿಗೂ ಹೆಚ್ಚಿನ ಕಾಲ ಅವರನ್ನು ಪ್ರಶ್ನೆ ಮಾಡಿತ್ತು. ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.

ಆದರೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಜೂನ್ 17 ರಿಂದ ಜೂನ್ 20 ರವರೆಗೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿಗೆ ನೀಡಿದ್ದ ಇಡಿ ಅಧಿಕಾರಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ಇಡಿ ಮುಂದೆ ಹಾಜರಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.