ನ.1ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಹೆಚ್‍ಡಿಕೆ.

71
firstsuddi

ಬೆಂಗಳೂರು: ನ.1ರಂದು ಜೆಡಿಎಸ್ ನ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಜೆಪಿ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಳೆ, ನಾಡಿದ್ದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಇದೆ. 13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ. ಜೆಡಿಎಸ್ ಕಾರ್ಯಕಾರಿ ಸಮಿತಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 1ರಿಂದ ಮೊದಲ ಹಂತದ ಪಂಚರತ್ನ ರಥಯಾತ್ರೆ ನಡೆಯಲಿದೆ. ಸುಮಾರು 36 ಕ್ಷೇತ್ರಗಳಲ್ಲಿ ಮೊದಲ ಹಂತದ ಯಾತ್ರೆ ನಡೆಯಲಿದೆ. ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. ನ.1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡ್ತೀವಿ ಎಂದು ಹೇಳಿದರು.