ಚಂಡೀಗಢ : ಗುಂಡಿನ ದಾಳಿಗೆ ಬಲಿಯಾಗಿದ್ದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಚಂಡೀಗಢದ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದಲ್ಲಿರುವ ಮೂಸೆವಾಲಾ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿ ಜೊತೆಗಿದ್ದರು.
ಸಿಧು ಮೂಸೆವಾಲಾ ಹತ್ಯೆ ಬಳಿಕ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಮೇ 29ರಂದು ಪಂಜಾಬ್ ನಲ್ಲಿ ಸಿಧು ಮೂಸೆವಾಲಾ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.










