ಪಂಜಾಬ್​ನ ಎಎಪಿ ಶಾಸಕಿಗೆ ಎಲ್ಲರೆದುರೇ ಕಪಾಳಮೋಕ್ಷ ಮಾಡಿದ ಪತಿ!

43
firstsuddi

ಚಂಡೀಗಢ : ಪಂಜಾಬ್​ನ ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ಅವರಿಗೆ ಪತಿ ಕಪಾಳಮೋಕ್ಷ ಮಾಡಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪಂಜಾಬ್ ನ ತಲ್ವಾಂಡಿ ಸಾಬೋ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿರುವ ಸುಖರಾಜ್ ಸಿಂಗ್ ಅವರೊಂದಿಗೆ ಪತ್ನಿ ಬಲ್ಜಿಂದರ್ ಕೌರ್ ವಾದ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಆಕ್ರೋಶಗೊಂಡಿರುವ ಸುಖರಾಜ್ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದಾಗ ಕೆಲವರು ಮಧ್ಯಪ್ರವೇಶಿಸಿ ಎಲ್ಲರನ್ನೂ ದೂರ ತಳ್ಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಅವರು, ಗಲಾಟೆ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ನೋಟಿಸ್ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.