ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್‌ರನ್ನು ಅಮಾನತುಗೊಳಿಸಿದ ಕಾಂಗ್ರೆಸ್.

69
firstsuddi

ಚಂಡೀಗಢ : ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಹಾಗೂ ಲೋಕಸಭೆ ಸಂಸದೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ.

ಪ್ರಣೀತ್ ಕೌರ್ ಅವರು ಬಿಜೆಪಿಗೆ ಸಹಾಯ ಮಾಡಲು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾಗೆ ದೂರುಗಳು ಬಂದಿದ್ದವು. ಬಳಿಕ ದೂರನ್ನು ಎಐಸಿಸಿ ಶಿಸ್ತು ಕ್ರಮ ಸಮಿತಿಗೆ (ಡಿಎಸಿ) ನೀಡಲಾಗಿತ್ತು. ಇದೀಗ ಡಿಎಸಿ ಪಕ್ಷದಿಂದ ಉಚ್ಚಾಟಿಸಿದೆ.

ಡಿಎಸಿ ಇದನ್ನು ಕೂಲಂಕಷವಾಗಿ ಪರಿಗಣಿಸಿದೆ ಮತ್ತು ಪಟಿಯಾಲದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಬೇಕೆಂದು ನಿರ್ಧರಿಸಿದೆ. ಈಗಾಗಲೇ ಪ್ರಣೀತ್ ಕೌರ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ ಹೇಳಿದ್ದಾರೆ.

ಪ್ರಸ್ತುತ ಬಿಜೆಪಿಯಲ್ಲಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2021ರ ನವೆಂಬರ್ ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು.